Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
22:56:00 2025-03-14

ಸಿದ್ದಾಪುರ: ತಾಲ್ಲೂಕು ಪಂಚಾಯತ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ ಕೃತಜ್ಞತಾ ಹಾಗೂ ಲೆಕ್ಕಪತ್ರ ಮಂಡನೆ ಕಾರ್ಯಕ್ರಮ ನಡೆಯಿತು.

News Details

ಸಿದ್ದಾಪುರ: ತಾಲ್ಲೂಕು ಪಂಚಾಯತ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ ಕೃತಜ್ಞತಾ ಹಾಗೂ ಲೆಕ್ಕಪತ್ರ ಮಂಡನೆ ಕಾರ್ಯಕ್ರಮ ನಡೆಯಿತು. ಇತ್ತೀಚೆಗೆ ಪಟ್ಟಣದ ಶಂಕರಮಠದಲ್ಲಿ ಜರುಗಿದ ಸಿದ್ದಾಪುರ ತಾಲುಕಾ ಏಳನೇ ಸಾಹಿತ್ಯ ಸಮ್ಮೇಳನ ಹಲವಾರು ಹೊಸ ಸಾಹಿತ್ಯ ಪ್ರತಿಭೆಗಳಿಗೆ ವೇದಿಕೆ ನೀಡಿದ್ದು ಮೆರವಣಿಗೆ, ಉದ್ಘಾಟನ ಕಾರ್ಯಕ್ರಮ ಮೊದಲ ದಿನ ಸಂಜೆ ಮುಗಿಸಿದ್ದಲ್ಲಿ ಗೋಷ್ಠಿಗಳಲ್ಲಿ ಹೆಚ್ಚಿನ ವಿಷಯ ಮಂಡನೆಗೆ ಅವಕಾಶ ಸಿಕ್ಕಿದೆ ಎಂದರಲ್ಲದೆ ತಾಲೂಕಿನ ಎಲ್ಲಾ ಸಾಹಿತ್ಯ ಪ್ರಿಯರ ಸಹಕಾರದಿಂದ ಬಹು ಯಶಸ್ಸನ್ನು ಕಂಡಿದೆ ಎಂದು ಏಳನೇ ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷರು, ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕ ಅಧ್ಯಕ್ಷ ಕೆ.ಜಿ. ನಾಗರಾಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಕಸಾಪ ತಾಲ್ಲೂಕ ಅಧ್ಯಕ್ಷ ಗೋಪಾಲ ನಾಯ್ಕ ಭಾಶಿ,ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರು,ತಹಶಿಲ್ದಾರ್ ಎಮ್‌. ಆರ್. ಕುಲಕರ್ಣಿಮಾತನಾಡಿ ಸಮ್ಮೇಳನ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು. ಗೌರವ ಸ್ವೀಕರಿಸಿದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ದೇವರಾಜ ಹಿತ್ಲಕೊಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಎಚ್. ನಾಯ್ಕ,ಪ.ಪಂ. ಮುಖ್ಯಾಧಿಕಾರಿ ಜೆ.ಆರ್.ನಾಯ್ಕ. ಕಸಾಪ ನಿಕಟಪೂರ್ವ ಅಧ್ಯಕ್ಷ ನಾಗರಾಜ ಮಾಳ್ಕೋಡ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಗೌಡರ್ ಗೌರವ ಸ್ವೀಕರಿಸಿ ಸಮ್ಮೇಳನದ ಯಶಸ್ಸಿನ ಹಿಂದಿನ ಪರಿಶ್ರಮದ ಹೆಜ್ಜೆಗಳನ್ನು ನೆನಪಿಸಿದರು. ಕಸಾಪ ಪದಾಧಿಕಾರಿಗಳು ಉಪಸ್ಥಿತರಿದ್ದರು.