Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
23:25:00 2025-03-14

ಶಿರಸಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾ.17ರಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ

News Details

ಶಿರಸಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾ.17ರಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಕಾವ್ಯಾನಂದ ನಾಯ್ಕ ಮತ್ತು ಜಿಲ್ಲಾ ಯುವ ಉಪಾಧ್ಯಕ್ಷ ಹರೀಶ ನಾಯ್ಕ್ ಹಸ್ವಿಗುಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, ಮಾ.17ರಂದು ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಅತೀ ಹೆಚ್ಚು ಯುವಕರು ಪಾಲ್ಗೋಳ್ಳಬೇಕು.‌ ಬೆಂಗಳೂರಿಗೆ ಬರುವ ಕಾರ್ಯಕರ್ತರಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದ ಅವರು .ಕೇಂದ್ರದ ನಾಯಕರು ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದರು ಈ ಸಂದರ್ಭದಲ್ಲಿ ರಾಜ್ಯಕಾರ್ಯದರ್ಶಿ ಪವನ್ ನಾಯ್ಕ, ಸಂತೋಷ ನಾಯ್ಕ, ಅಪೂರ್ವ ನಾಯ್ಕ, ಪ್ರಶಾಂತ ನಾಯ್ಕ ಸೇರಿದಂತೆ ಹಲವರು ಇದ್ದರು.