
ಉತ್ತರ ಕನ್ನಡ: ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳಿಗೆ 15 ದಿನಗಳ ಬೇಸಿಗೆ ಶಿಬಿರ
News Details
ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ ಮಟ್ಟದಲ್ಲಿ ಮಕ್ಕಳಿಗಾಗಿ ಸರ್ಕಾರವೇ ಬೇಸಿಗೆ ಶಿಬಿರ ಆಯೋಜಿಸಲು ಮುಂದಾಗಿದೆ. ಈಗಾಗಲೇ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಗಳಲ್ಲಿ ಶಿಬಿರ ಶುರುವಾಗಿದೆ. ಇನ್ನಷ್ಟು ಕಡೆ ಶಿಬಿರ ಆಯೋಜನೆಗೆ ಸಿದ್ಧತೆ ನಡೆದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈ ಶಿಬಿರ ಆಯೋಜಿಸಲಾಗುತ್ತಿದೆ. ಪ್ರತಿ ದಿನ 3 ತಾಸುಗಳ ಕಾಲ 15 ದಿನದವರೆಗೆ ಶಿಬಿರ ನಡೆಸಲು ನಿರ್ಧರಿಸಲಾಗಿದೆ.
ಈ ಶಿಬಿರದಲ್ಲಿ ಗ್ರಾಮಾಂತರ ಪ್ರದೇಶದಲ್ಲಿರುವ ಮಕ್ಕಳ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುತ್ತಿದೆ. ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಈ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಓದುವ, ಬರೆಯುವ, ಅಂಕಿ ಸಂಖ್ಯೆ ವಿಜ್ಞಾನ ವಿಷಯಗಳು, ನಾಯಕತ್ವ ಮತ್ತು ಸಂವಹನ ಕೌಶಲ್ಯದ ಬಗ್ಗೆ ಕಲಿಸಲಾಗುತ್ತದೆ. ಪರಿಸರ ಕಾಳಜಿ, ಸಾಮಾಜಿಕ ಕಾಳಜಿ ಬೆಳೆಸುವುದು ಮತ್ತು ಸ್ಥಳೀಯ ಸಂಸ್ಕೃತಿ, ಜೀವನ ಶೈಲಿ, ಇತಿಹಾಸ ಅಂಶಗಳ ಬಗ್ಗೆಯೂ ಬೆಳಕು ಚಲ್ಲಲಾಗುತ್ತದೆ. ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಸಹ ಈ ಬೇಸಿಗೆ ಶಿಬಿರದ ಆಶಯವಾಗಿರುತ್ತದೆ. ಈ ಬೇಸಿಗೆ ಶಿಬಿರವೂ ಮಕ್ಕಳಲ್ಲಿನ ಸೃಜನಾತ್ಮಕತೆಗೆ ಸಹಾಯಕವಾಗಿ ಮಕ್ಕಳ ಪುಸ್ತಕ, ದಿನಪತ್ರಿಕೆ, ನಿಯತಕಾಲಿಕೆಗಳನ್ನು ಓದುವುದು ಚಿತ್ರ ಓದುವಿಕೆ, ಕಥೆ ಕಟ್ಟುವಿಕೆ, ಗಟ್ಟಿ ಮಾಡುವುದು, ಭಾಷÀಣ ಮಾಡುವುದು ಸೇರಿದಂತೆ ಬರೆಯುವ ಹಾಗೂ ಅಭಿವ್ಯಕ್ತಿ ಸಾಮರ್ಥ್ಯ ಹೆಚ್ಚಿಸುವ ಚಟುವಟಿಕೆಗಳನ್ನು ಒಳಗೊಂಡಿದೆ.
ಅoಕಿ ಸಂಖ್ಯೆ ಮತ್ತು ವಿಜ್ಞಾನಕ್ಕೆ ಸಂಬoಧಿಸಿದoತೆ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಕಾಮನಬಿಲ್ಲು ಮೂಡಿಸುವಿಕೆ, ವಿವಿಧ ಗಣಿತದ ಘನಾಕೃತಿಗಳ ಪರಿಚಯ, ಚಿನ್ನಿದಾಂಡು, ಗ್ರಾಮದಲ್ಲಿ ಬಳಸುವ ಅಳತೆ ಮತ್ತು ಮಾಪಕಗಳು, ಟ್ಯಾನ್‌ಗ್ರಾಮ್. ಪೇಪರ್ ಫ್ಯಾನ್, ಜೆಟ್ ಪ್ಲೇನ್, ಕಣ್ಣು ಮಿಟುಕಿಸುವ ಗೊಂಬೆ, ಚದುರಂಗ, ಕೇರಂ, ಆಕಾಶ ವೀಕ್ಷಣೆ ಮತ್ತಿತರೆ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ನಾಯಕತ್ವ, ನೈತಿಕತೆ, ಸಹಾನುಭೂತಿ, ಜವಾಬ್ದಾರಿ ನಿರ್ವಹಣೆ, ತಂಡ ನಿರ್ವಹಣೆ, ಸಾಮಾಜಿಕ ಹೊಂದಾಣಿಕೆ ಮತ್ತು ನಾಗರಿಕ ಪ್ರಜ್ಞೆ ವಿಷಯವಾಗಿ ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಮಕ್ಕಳ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು, ದೈನಂದಿನ ಬದುಕಿನಲ್ಲಿ ಕಾಣುವ ಚಟುವಟಿಕೆಗಳನ್ನು ಅರಿಯಲು, ಶೋಧನಾ ಪ್ರವೃತ್ತಿ ಪ್ರೋತ್ಸಾಹಿಸಲು ಮತ್ತು ಕಲಿತದ್ದನ್ನು ವರದಿ ಮಾಡಲು ಯೋಜನಾ ಚಟುವಟಿಕೆಗಳನ್ನು ರೂಪಿಸಲಾಗಿದೆ.
ಯೋಜನಾ ಚಟುವಟಿಕೆಗಳಲ್ಲಿ ಪ್ರಮುಖವಾಗಿ ನಮ್ಮೂರಿನ ಪಕ್ಷಿಗಳು, ನೀರಿನ ಪಯಣ, ನನ್ನ ಊರು, ನಮ್ಮೂರಿನ ಇತಿಹಾಸ, ಜಾತ್ರೆ. ಜನಪದ ಗೀತೆಗಳು/ಜನಪದ ಕಥೆ, ಕ್ರೀಡೆಗಳು, ಕಲೆಗಳು, ಸ್ಥಳೀಯ ಸಂಸ್ಥೆಗಳಿಗೆ (ಅoಚೆ ಕಚೇರಿ, ಹಾಲು ಉತ್ಪಾದಕರ ಸಹಕಾರ ಸಂಘ, ಬ್ಯಾಂಕ್, ಪಶುವೈದ್ಯಕೀಯ ಆಸ್ಪತ್ರೆ, ಅಂಗನವಾಡಿ ಕೇಂದ್ರ ಗ್ರಾಮ ಪಂಚಾಯತಿ, ಆಸ್ಪತ್ರೆ ಇತ್ಯಾದಿ) ಭೇಟಿ ಮಾಡಲು ಅವಕಾಶವಿದೆ. 8ರಿಂದ 13 ವರ್ಷದೊಳಗಿನ 40 ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸುವ ಅವಕಾಶವಿದೆ. ಈ ಶಿಬಿರಕ್ಕೆ ನಿಮ್ಮ ಮಕ್ಕಳನ್ನು ಸೇರಿಸಲು ಕೂಡಲೇ ಗ್ರಾಮ ಪಂಚಾಯತಗೆ ಭೇಟಿ ಕೊಡಿ.. ಇನ್ನಷ್ಟು ಮಾಹಿತಿ ಪಡೆಯಿರಿ!