
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎನ್ನುವುದರ ಕುರಿತು ಮಾಹಿತಿ ನೀಡಲಾಯಿತು.
News Details
ಸಿದ್ದಾಪುರ : ತಾಲೂಕಿನ ಹಾರ್ಸಿಕಟ್ಟಾ ದ ಅಶೋಕ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎನ್ನುವುದರ ಕುರಿತು ಮಾಹಿತಿ ನೀಡಲಾಯಿತು. ಹಾರ್ಸಿಕಟ್ಟಾ ಪಶುಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಡಾ. ಶ್ರೀ ಶ್ರೇಯಸ್ ಬಿ. ರಾಜ್ ಹಾಗೂ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಮಂಜುನಾಥ ಶಾಸ್ತ್ರಿ ಇವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮನೋಸ್ಟೈರ್ಯ , ಬೆಂಬಲ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳು ಅನಗತ್ಯ ಮಾನಸಿಕ ಒತ್ತಡಕ್ಕೆ ಒಳಗಾಗುವುದು ಬೇಡ. ಉತ್ತಮ ಅಂಕ ಪಡೆಯಲು ನಿರಂತರ ಪರಿಶ್ರಮ ಅಗತ್ಯವಿದೆ, ಗೂಗಲ್ ಕಂಡು ಹಿಡಿದ ವ್ಯಕ್ತಿ, ಇನಫೋಸಿಸ್‌ನ ರುವಾರಿಯಾದವರ ಉದಾರಣೆಯ ಮೂಲಕ ಜೀವನದಲ್ಲಿ ಗುರಿ ಇಟ್ಟು ನಡೆಯಬೇಕು. ಓದು ಬರವಣಿಗೆಯ ಮೂಲಕ ನೆನಪಿನಲ್ಲಿಟ್ಟುಕೊಳ್ಳಲು ಸಹಾಯಕವಾಗಿದೆ. ಮೊದಲ ಘಟ್ಟದಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಿರಿ ಎಂದು ಮಾರ್ಗದರ್ಶನ ನೀಡಿ ಆತ್ಮವಿಶ್ವಾಸದ ಮಾತುಗಳನ್ನು ಆಡಿ ಪರೀಕ್ಷೆಯ ಭಯ ನಿವಾರಣೆಯ ಕುರಿತು ತಿಳಿಸಿಕೊಟ್ಟರು. ಶಾಲಾ ಮುಖ್ಯಾಧ್ಯಾಪಕ ರಾಜೇಂದ್ರ ಕಾಂಬಳೆ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.