Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
7:27:00 2025-04-20

ಪತ್ರಕರ್ತ ಹಾಗೂ ಬಿಲ್ಲವ ಹೋರಾಟಗಾರ ಕಿರಣ್ ಪೂಜಾರಿಯವರಿಂದ ಸೋಮವಾರ ಕುಂದಾಪುರ ತಾಲೂಕು ಆಫೀಸ್ ಎದುರಿಗೆ ಅರೆಬೆತ್ತಲೆ ಧರಣಿ

News Details

ಪೋಲೀಸ್ ಅಧಿಕಾರಿಯೊಬ್ಬರು ಹಾಗೂ ಗ್ರಾಮ ಪಂಚಾಯತ ಅಧಿಕಾರಿಯೊಬ್ಬರು ಕರ್ತವ್ಯಲೋಪ ಎಸಗಿ ತಮ್ಮ ಮೇಲೆ ದೌರ್ಜನ್ಯ ವೆಸಗಿದ್ದಾರೆ ಮತ್ತು ನ್ಯಾಯವಾದಿ ಯೊಬ್ಬರು ತಮಗೆ ಹಾಗೂ ತಮ್ಮ ಸಮಾಜಕ್ಕೆ ಅವಮಾನಿಸಿ ತಮ್ಮ ಮೇಲೆ ಸುಳ್ಳು ಪ್ರಕರಣಗಳು ದಾಖಲಿಸುವಂತೆ ಪೋಲಿಸರ ಮೇಲೆ ಒತ್ತಡ ಹೇರಿದ್ದಾರೆ. ಈ ಮೂವರ ವಿರುದ್ದ ಸೋಮವಾರ ಕುಂದಾಪುರ ತಾಲೂಕು ಆಫೀಸ್ ಎದುರಿಗೆ ಅರೆಬೆತ್ತಲೆ ಧರಣಿ ನಡೆಸಲಿದ್ದೇನೆ ಎಂದು ಪತ್ರಕರ್ತ ಹಾಗೂ ಬಿಲ್ಲವ ಹೋರಾಟಗಾರ ಕಿರಣ್ ಪೂಜಾರಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಬಿಲ್ಲವರ ಬಗ್ಗೆ ಲಘುವಾಗಿ ಮಾತನಾಡಿದ ಹಾಗೂ ತನಗೆ ನಿಂದನೆ ಮಾಡಿದ ತನ್ನ ಸಮಾಜದ ಬಗ್ಗೆ ಅವಮಾನಕರ ವಾಗಿ ನಿಂದಿಸಿ ಸುಳ್ಳು ಪ್ರಕರಣಗಳನ್ನು ಧಾಖಲಿಸುವಂತೆ ಒತ್ತಡ ಹೇರಿದ ಹಾಗೂ ಪ್ರಕರಣ ಒಂದರಲ್ಲಿ ತಹಸೀಲ್ದಾರ್ ಯಥಾ ಸ್ಥಿತಿ ಕಾಪಾಡಬೇಕು ಎಂದು 8 ಸಲ ಆದೇಶ ಮಾಡಿದರು ಅವರಿಗೂ ಅಗೌರವ ತೋರಿದ ಅಲ್ಲದೇ ಉಚ್ಚ ನ್ಯಾಯಾಲಯ ಮತ್ತು ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಕೇಸ್ ಇದ್ದರು ನ್ಯಾಯಾಂಗ ಉಲ್ಲಂಘನೆ ಮಾಡಿಸಿ ನ್ಯಾಯವಾದಿಯೊಬ್ಬರೀ ವಕೀಲ ವೃತ್ತಿಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದಾರೆ ಕರ್ತವ್ಯಕ್ಕೆ ಕಪ್ಪು ಚುಕ್ಕೆ ಮಾಡಿದ ನ್ಯಾಯವಾದಿ ಯೊಬ್ಬರನ್ನು ಬಾರ್ ಕೌನ್ಸಿಲ್ ನಿಂದ ಅಮಾನತು ಮಾಡಬೇಕು ಹಾಗೂ ಬಿಲ್ಲವ, ದಲಿತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಪೋಲಿಸ್ ಅಧಿಕಾರಿಯೊಬ್ಬರು ತಮ್ಮ ಮೇಲೆ ಕುಂದಾಪುರದಲ್ಲಿ 2 ಮತ್ತು ಕೊಲ್ಲೂರನಲ್ಲಿ 1 ಸುಳ್ಳು ಕಂಪ್ಲೇಂಟ್ ಮಾಡಿಸಿ, ಉಚ್ಚ ನ್ಯಾಯಾಲಯ ಮತ್ತು ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಕೇಸ್ ಇದೆ. ಕೇಸು ದಾಖಲಿಸಿದವರ ಪರವಾಗಿ ಸತ್ಯ ಅಸತ್ಯೆಯನ್ನು ಅವಲೋಕಿಸದೆ, ದಲಿತ ಮಹಿಳೆಯರ ಮೇಲೆ ಸುಳ್ಳು ದೂರು ದಾಖಲಿಸಿ, ಅವರು ನೀಡಿದ ದೂರನ್ನು ದಾಖಲಿಸದೇ ಹಿಂದೆ ಕಳುಹಿಸಿದ್ದಾರೆ ಎಂದು ಆರೋಪಿಸಿ, ಇವರ ವಿರುದ್ಧ ಇಲಾಖಾ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕಾಗಿ ಅಗ್ರಹಿಸಿ.
ಗ್ರಾಮ ಆಡಳಿತ ಅಧಿಕಾರಿಯೊಬ್ಬರು ಸರಕಾರಿ ಜಾಗವನ್ನು ಒತ್ತುವರಿ ಮಾಡಿದ ಕೆಲವರ ಕೈಗೊಂಬೆ ಆಗಿ ಬಹುಪರಾಕ್ ಹೇಳುತ್ತಿದ್ದಾರೆ 8 ಬಾರಿ ತಹಸೀಲ್ದಾರ್ ಆದೇಶ ಉಲ್ಲಂಘನೆ ಮಾಡಿದರು ಸರಿಯಾದ ವರದಿ ನೀಡದೆ, ಪತ್ರಕರ್ತರು ಮಾಹಿತಿ ಕೇಳಿದಾಗ ಏನು ಹರಕೊಳ್ಳುತ್ತಿರಿ ಎಂದು ಅಗೌರವ ತೋರಿ, ಉಚ್ಚ ನ್ಯಾಯಾಲಯ ಮತ್ತು ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಕೇಸ್ ಇದ್ದರು ನ್ಯಾಯಾಂಗ ಉಲ್ಲಂಘನೆ ಬಗ್ಗೆ ಅರಿವು ಮೂಡಿಸದೆ ಸೂಕ್ತ ಕ್ರಮ ಕೈಗೊಳ್ಳದೆ, ಕರ್ತವ್ಯದಲ್ಲಿ ಲೋಪ, ಕರ್ತವ್ಯ ನಿರ್ಲಕ್ಷತನ, ಕರ್ತವ್ಯ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಅಮಾನತು ಮಾಡಬೇಕಾಗಿ ಅಗ್ರಹಿಸಿದ್ದಾರೆ.
ಇವರೆಲ್ಲರ ವಿರುದ್ಧ ಸೋಮವಾರ ಕುಂದಾಪುರ ತಾಲೂಕು ಆಫೀಸ್ ಎದುರಿಗೆ ಅರೆಬೆತ್ತಲೆ ಧರಣಿ ನಡೆಸಲಿದ್ದೇನೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಸಾಮಾಜಿಕ ಹೋರಾಟಗಾರರು, ಪತ್ರಕರ್ತರು, ಮಾಹಿತಿಹಕ್ಕು ಕಾರ್ಯಕರ್ತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದೆ. ಕಿರಣ ಪುಜಾರಿಯವರಂತಹ ಅನೇಕ ಹೋರಾಟಗಾರರು ಸುಳ್ಳು ದೂರು ದಾಖಲಿಸಿಕೊಂಡು ದೌರ್ಜನ್ಯ ಅನುಭವಿಸುತ್ತಿದ್ದಾರೆ. ಸರಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಾಮಾಜಿಕ ಹೋರಾಟಗಾರರಿಗೆ, ಪತ್ರಕರ್ತರಿಗೆ, ಮಾಹಿತಿ ಹಕ್ಕು ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕಾಗಿದೆ.