Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-20

ಶಾಸಕಭೀಮಣ್ಣ ನಾಯ್ಕರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲನ್ಯಾಸ

News Details

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಶನಿವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿದರು.
ತಾಲೂಕಿನ ಬೇಡ್ಕಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಡ್ಕಣಿ ಊರಿನ ದೊಡ್ಡಬೈಲು ಹಕ್ಕಲಿನಿಂದ ಕುದ್ರಗುಂಡಿ ತೋಟದ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಸೂಚಿಸಿದರು. ನಂತರ ಇಟಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವರ್ತೆಕೊಡ್ಲು ಜಟಗಿನಮನೆ ಕಲಾವನ ಹೊಳೆಗೆ ಸೇತುವೆ ಸಹಿತ ಕಿಂಡಿ ಆಣೆಕಟ್ಟು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಚಾರಕ್ಕೆ ಯೋಗ್ಯವಾಗುವಂತೆ ಸೇತುವೆ ಹಾಗೂ ಕಿಂಡಿ ಆಣೆಕಟ್ಟು ನಿರ್ಮಿಸುವಂತೆ ಸೂಚಿಸಿದರು.
ಈ ವೇಳೆ ಸ್ಥಳೀಯ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಹಾಜರಿದ್ದರು.