Loading...
  • aksharakrantinagarajnaik@gmail.com
  • +91 8073197439
Total Visitors: 2788
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-20

ಜಾತಿ ಕಾಲಂ ನಲ್ಲಿ "ಚನ್ನಯ್ಯ" ನಮೂದಿಸಲು ಅಖಿಲ ಕರ್ನಾಟಕ ಚನ್ನಯ್ಯ (ಬಲಗೈ) ಸಮಾಜ ಅಭಿವೃದ್ಧಿ ಹೋರಾಟ ಸಮಿತಿ (ರಿ) ರಾಜ್ಯಾಧ್ಯಕ್ಷ ಬಸವರಾಜ ದೊಡ್ಮನಿ ಕರೆ

News Details

ಶಿರಸಿ : ನಿವೃತ್ತ ನ್ಯಾಯಮೂರ್ತಿಗಳಾದ ಎಚ್ ಎನ್ ನಾಗಮೋಹನದಾಸ್ ಎಕ ಸದಸ್ಯ ವಿಚಾರಣಾ ಆಯೋಗದ ವತಿಯಿಂದ ಸಮೀಕ್ಷೆಗಾಗಿ ಗಣತಿದಾರರು ತಮ್ಮ ಮನೆಗಳಿಗೆ ಬಂದಾಗ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಹೆಸರನ್ನು ಸರಿಯಾಗಿ ನಮೂದಿಸಿ ಜಾತಿ ಕಾಲಂನ ಉಪಜಾತಿ ಕಾಲಂನಲ್ಲಿ "ಚನ್ನಯ್ಯ" ಜಾತಿ ಎಂದೆ ಬರೆಯಿಸಿ ಹಾಗೂ ಬಲಗೈ ಗುಂಪು ಎಂದು ಹೇಳಿ ಬರೆಯಿಸಿ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸಮಾಜದ ಮುಖಂಡ,
ಅಖಿಲ ಕರ್ನಾಟಕ ಚನ್ನಯ್ಯ (ಬಲಗೈ) ಸಮಾಜ ಅಭಿವೃದ್ಧಿ ಹೋರಾಟ ಸಮಿತಿ (ರಿ) ರಾಜ್ಯಾಧ್ಯಕ್ಷ ಬಸವರಾಜ ದೊಡ್ಮನಿ.
ಅವರು ಶಿರಸಿಯ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕ ಸರಕಾರ ಪರಿಶಿಷ್ಟ ಜಾತಿಗಳ 101 ಜಾತಿಗಳಿಗೆ ಒಳಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಿದೆ.
ಈ ಆಯೋಗವು ಸದ್ಯದಲ್ಲೇ ಒಳಮೀಸಲಾತಿಯನ್ನು ಜಾರಿಗೊಳಿಸುವ ಸಲುವಾಗಿ 101 ಜಾತಿಗಳನ್ನು ಪ್ರತ್ಯೇಕವಾಗಿ ಜಾತಿ ಜನಸಂಖ್ಯೆಯನ್ನು ಗಣತಿ ಮಾಡಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಾತಿಗಳಿಗೆ ಹೆಚ್ಚಿನ ಪಾಲನ್ನು ನೀಡುವ ಮತ್ತು ಜಾತಿಗಳಲ್ಲಿ ಎಡಗೈ, ಬಲಗೈ, ವಿಂಗಡಿಸುವ ಸಾಧ್ಯತೆ ಇದೆ.
ಸರಕಾರದ ಸೌಲಭ್ಯಗಳನ್ನು ಪಡೆಯಬೇಕಾದರೆ ಸರಿಯಾದ ಮಾಹಿತಿಯನ್ನು ನೀಡುವುದು ಅವಶ್ಯ ಎಂದು ಸಮಾಜಕ್ಕೆ ಅವರು ಕರೆಯಿತ್ತರು. ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.