Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-01

ಅರಬೈಲ್ ಘಟ್ಟದಲ್ಲಿ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರಿಗೆ ಗಂಭೀರ ಗಾಯ

News Details

ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ರಾಸಾಯನಿಕ ತುಂಬಿದ ಟ್ಯಾಂಕರ್ ಹಾಗೂ ಜಲ್ಲಿಕಲ್ಲು ತುಂಬಿದ ಲಾರಿಯು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಎರಡು ವಾಹನ ಚಾಲಕರು ಲಾರಿಯಲ್ಲಿ ಸಿಕ್ಕಿಬಿದ್ದು ಗಾಯಗೊಂಡರು.

ಅಂಕೋಲಾ - ಹುಬ್ಬಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಎಥನೋಲ್ ತುಂಬಿದ ಟ್ಯಾಂಕರ್ ಇಳಿಜಾರಿನಲ್ಲಿ ವೇಗವಾಗಿ ಚಲಿಸಿತು. ಎದುರಿನಿಂದ ಬರುತ್ತಿದ್ದ ಜಲ್ಲಿಕಲ್ಲು ತುಂಬಿದ ಲಾರಿಗೆ ಟ್ಯಾಂಕರ್ ಗುದ್ದಿತು. ಪರಿಣಾಮ ಎರಡೂ ವಾಹನ ಜಖಂ ಆಯಿತು. ಈ ಅಪಘಾತದಿಂದ ಎರಡೂ ವಾಹನದ ಚಾಲಕರು ವಾಹನಗಳಲ್ಲಿ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡರು. ತುರ್ತು ಚಿಕಿತ್ಸೆ ಲಭಿಸಿದ್ದರಿಂದ ಅವರು ಪ್ರಾಣಾಪಾಯದಿಂದ ಪಾರಾದರು.

ಅಗ್ನಿಶಾಮಕದಳದ ಸಿಬ್ಬಂದಿ ಲಾರಿಯಲ್ಲಿ ಸಿಲುಕಿದ್ದ ಚಾಲಕರನ್ನು ರಕ್ಷಿಸಿದರು. ಅಗ್ನಿಶಾಮಕದಳದ ಸುಧೀರ್ ಕಿಂದಳ್ಕರ್, ಪ್ರಣಯ ಕೋಚರೆಕರ್, ನಾಗರಾಜ ನಾಯಕ್, ಅಮಿತ ಗುನಗಿ, ಸಲೀಮ್ ನದಾಫ್, ಚೇತನ್ ಶರ್ಮ ಕೆ ಎಸ್ ಕಾರ್ಯಚರಣೆಯಲ್ಲಿದ್ದರು.