Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-01

ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕ ಸಸ್ಪೆಂಡ್: ಕಾರ್ಮಿಕರ ದಿನಾಚರಣೆಯಂದೇ ಗೇಟ್ಪಾಸ್

News Details

ಕರ್ತವ್ಯದ ವೇಳೆಯಲ್ಲೇ ಮಾರ್ಗಮಧ್ಯ ಬಸ್ (Bus) ನಿಲ್ಲಿಸಿ ನಮಾಜ್ (Namaz) ಮಾಡಿದ್ದ ಚಾಲಕ ಎ.ಆರ್.ಮುಲ್ಲಾನನ್ನು ಅಮಾನತು (Suspend) ಮಾಡಲಾಗಿದೆ. ಹಾನಗಲ್ (Hangal) ಘಟಕದ ಚಾಲಕ ಎ.ಆರ್.ಮುಲ್ಲಾ (MR Mulla) ಕಾರ್ಯನಿರತ ವೇಳೆ ರಸ್ತೆ ಪಕ್ಕ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ತವ್ಯಲೋಪ ಆರೋಪದಲ್ಲಿ ಚಾಲಕ ಎ.ಆರ್.ಮುಲ್ಲಾನನ್ನು ಅಮಾನತುಗೊಳಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಇಂದು (ಮೇ 01) ಆದೇಶ ಹೊರಡಿಸಿದ್ದಾರೆ. ವಿಚಾರಣೆ ಮುಗಿಯುವವರೆಗೂ ಅಮಾನತು ಮಾಡಿ ಆದೇಶಿಸಿದ್ದು, ಘಟನೆ ಬಗ್ಗೆ ಸಂಪೂರ್ಣ ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ.