Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-02

ಎಸ್ ಎಸ್ ಎಲ್ ಸಿಯಲ್ಲಿ ಶೇ.66.14 ವಿದ್ಯಾರ್ಥಿಗಳು ತೇರ್ಗಡೆ, 22 ಮಂದಿ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ ಮೊದಲ ಸ್ಥಾನ

News Details

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದ್ದು, ಇಂದು ಮಧ್ಯಾಹ್ನ 12.30ರ ನಂತರ ಇಲಾಖೆಯ ವೆಬ್ ಸೈಟ್ ಗಳಲ್ಲಿ ಫಲಿತಾಂಶಗಳನ್ನು ವೀಕ್ಷಿಸಬಹುದು.

ಈ ವರ್ಷ ಶೇ. 91.12ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶೇ.89.96ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ, ಶೇ. 83.19 ಫಲಿತಾಂಶದೊಂದಿಗೆ ಉತ್ತರ ಕನ್ನಡ ತೃತೀಯ, ಶೇ.82.29 ರಷ್ಟು ಫಲಿತಾಂಶದೊಂದಿಗೆ ಶಿವಮೊಗ್ಗ ನಾಲ್ಕನೇ ಸ್ಥಾನ ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ.