Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
18:30:00 2025-03-24

ದಕ್ಷ ವಲಯ ಅರಣ್ಯಾಧಿಕಾರಿ ಭವ್ಯಾ ನಾಯ್ಕ್ ರಿಗೆ ವಿಶ್ವ ಮಹಿಳಾ ದಿನಾಚರಣೆಯ ಸನ್ಮಾನ.

News Details

ದಕ್ಷ ವಲಯ ಅರಣ್ಯಾಧಿಕಾರಿ ಭವ್ಯಾ ನಾಯ್ಕ್ ರಿಗೆ ವಿಶ್ವ ಮಹಿಳಾ ದಿನಾಚರಣೆಯ ಸನ್ಮಾನ. ಶಿರಸಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶಿರಸಿ ತಾಲೂಕಿನ ಬನವಾಸಿಯಲ್ಲಿ ಅತಿಥಿ ನಿಕೇತನ ಹಾಗೂ ಜೀವನ ಜ್ಯೋತಿ ಒಕ್ಕೂಟದಿಂದ ದಕ್ಷ, ಪ್ರಾಮಾಣಿಕ ಅಧಿಕಾರಿಗಳಾದ ಬನವಾಸಿಯ ವಲಯ ಅರಣ್ಯಾಧಿಕಾರಿ ಶ್ರೀಮತಿ ಭವ್ಯ ನಾಯ್ಕ ರವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಭವ್ಯ ನಾಯ್ಕ ರವರು ಮಹಿಳೆಯರು ಸ್ವಾವಲಂಬನೆಯಿಂದ ತಮ್ಮ ಬದುಕನ್ನು ರೂಪಿಸಿಕೊಳ್ಳಲು ಸಲಹೆ ನೀಡಿದರು, ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮನ್ನು ತಾವು ತೊಡಗಿಸಿಕೊಂಡು ಪ್ರಗತಿ ಸಾಧಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿದ ನ್ಯಾಯವಾದಿ ಬಸವರಾಜ ದೊಡ್ಮನಿಯವರು ಹುಟ್ಟಿನಿಂದ ಸಾಯುವವರೆಗೂ ಹೆಣ್ಣಿನ ಮಹತ್ವ ಮರೆಯಲಾಗದು. ಮಹಿಳೆಯರನ್ನು ಎಲ್ಲಿ ಆರಾಧಿಸುತ್ತೇವೆಯೊ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ, ಸ್ತ್ರೀಯರನ್ನು ಶಕ್ತಿ ಸ್ವರೂಪಿಣಿಯಾಗಿ ಆರಾಧಿಸಿದ ದೇಶ ನಮ್ಮದು, ಅವರನ್ನು ಗೌರವಿಸುವುದು ಸಮಾಜದ ಕರ್ತವ್ಯ ಎಂದರು. ಈ ಸಂದರ್ಭದಲ್ಲಿ ಬನವಾಸಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬಿ.ಬಿ.ಆಯುಷ್ ಮಾತನಾಡಿ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಜೀವನ ಜ್ಯೋತಿ ಒಕ್ಕೂಟದ ಅಧ್ಯಕ್ಷರು, ಮಾಜಿ ತಾ.ಪ ಅಧ್ಯಕ್ಷೆ ಶ್ರೀಲತಾ ಶಿವಾಜಿ ಕಾಳೆರಮನಿ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷರ ಭಾಷಣ ಮಾಡಿ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು ಹೇಳಿ ಮಹಿಳೆಯರಿಗೆ ಸ್ಪೂರ್ತಿ ತುಂಬಿದರು,ಸಿಸ್ಟರ್ ದಿಯಾ, ಸಿಸ್ಟರ್ ಸಂತಾನ ಇದ್ದರು.