
18-2 ವರ್ಷಗಳ ಬಳಿಕ RCB ಮುಂದೆ CSK ಧೂಳೀಪಟ
News Details
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ (ಐಪಿಎಲ್ 2025) 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 213 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 211 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 18 ವರ್ಷಗಳಾಗಿವೆರ. ಈ ಹದಿನೆಂಟು ವರ್ಷಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಲ್ಲಾ ಸೀಸನ್ ಆಡಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) 16 ಸೀಸನ್ಗಳನ್ನು ಮಾತ್ರ ಆಡಿದೆ. ಅಂದರೆ 2016 ಮತ್ತು 2017 ರಲ್ಲಿ ಸಿಎಸ್ಕೆ ಬ್ಯಾನ್ ಆಗಿತ್ತು.
ಈ 16 ಸೀಸನ್ಗಳಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ತಂಡಗಳು ಮುಖಾಮುಖಿಯಾಗಿವೆ. ಈ ವೇಳೆ ಒಮ್ಮೆಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ಪಂದ್ಯಗಳನ್ನು ಗೆದ್ದಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಒಂದೇ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎರಡು ಬಾರಿ ಸೋಲಿಸುವಲ್ಲಿ ಆರ್ಸಿಬಿ ಪಡೆ ಯಶಸ್ವಿಯಾಗಿದೆ.
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 8ನೇ ಪಂದ್ಯದಲ್ಲಿ ಸಿಎಸ್ಕೆ ತಂಡವನ್ನು 50 ರನ್ಗಳಿಂದ ಬಗ್ಗು ಬಡಿಯುವಲ್ಲಿ ಆರ್ಸಿಬಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 20 197 ರನ್ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಸಿಎಸ್ಕೆ 146 ರನ್ಗಳಿಸಲಷ್ಟೇ ಶಕ್ತರಾದರು.
ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 52ನೇ ಪಂದ್ಯದಲ್ಲೂ ಸಿಎಸ್ಕೆ ತಂಡಕ್ಕೆ ಸೋಲುಣಿಸುವಲ್ಲಿ ಆರ್ಸಿಬಿ ಪಡೆ ಸಫಲರಾಗಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 213 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಸಿಎಸ್ಕ 211 ರನ್ಗಳಿಸಿ 2 ರನ್ಗಳಿಂದ ಸೋಲೊಪ್ಪಿಕೊಂಡಿದೆ.
ಈ ಗೆಲುವುಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೀಸನ್ವೊಂದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 2 ಬಾರಿ ಬಗ್ಗು ಬಡಿದಿದೆ. ಈ ಗೆಲುವುಗಳೊಂದಿಗೆ ರಾಯಲ್ ಪಡೆಯು ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ಸ್ ಟೇಬಲ್ನಲ್ಲಿ ಪಾತಾಳಕ್ಕೆ ಕುಸಿದಿದೆ.