Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-04

ಕರ್ನಾಟಕದಾದ್ಯಂತ ಮೇ 6ರಿಂದ ಭಾರಿ ಮಳೆ , ಬೆಂಗಳೂರು ಸೇರಿ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

News Details

ಬೆಂಗಳೂರು ಸೇರಿ 12 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಘೋಷಿಸಲಾಗಿತ್ತು. ಮೇ 6ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮಳೆಯಾಗಲಿದೆ.

ಕರ್ನಾಟಕದಾದ್ಯಂತ ಮೇ 6ರಿಂದ ಭಾರಿ ಮಳೆ(Rain)ಯಾಗಲಿದ್ದು, ಬೆಂಗಳೂರು ಸೇರಿ 12 ಜಿಲ್ಲೆಗಳಿಯೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮಳೆಯಾಗಲಿದೆ.

ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮೇ 6ರಿಂದ ಭಾರಿ ಮಳೆಯಾಗಲಿದೆ.

ಹೊನ್ನಾಳಿ, ದಾವಣಗೆರೆ, ಚಿಕ್ಕಮಗಳೂರು, ಟಿಜಿ ಹಳ್ಳಿ, ಸೋಮವಾರಪೇಟೆ, ಹಿರೇಕೆರೂರು, ತ್ಯಾಗರ್ತಿ, ಹರಪನಹಳ್ಳಿ, ನಾಯಕರಹಟ್ಟಿ, ದಾವಣಗೆರೆ, ನಾಗಮಂಗಲ, ಹಗರಿಬೊಮ್ಮನಹಳ್ಳಿ, ಗಂಗಾವತಿ, ಮುನಿರಾಬಾದ್, ಬೆಳ್ತಂಗಡಿ, ಸುಳ್ಯ, ತರೀಕೆರೆ, ಕಳಸ, ಕುಣಿಗಲ್, ಶೃಂಗೇರಿ, ಎಚ್​ಡಿಕೋಟೆ, ಬೆಂಗಳೂರು ಜಿಕೆವಿಕೆ, ಬೆಂಗಳೂರು ಕೆಐಎಎಲ್​, ಜಗಳೂರು, ಶಿಗ್ಗಾಂವ್, ಯಲಬುರ್ಗಾ, ಕುಷ್ಟಗಿ, ಸಿಂಧನೂರು, ಮಾನ್ವಿ, ಎಂಎಂ ಹಿಲ್ಸ್​, ಜಯಪುರ, ಮಿಡಿಗೇಶಿ, ಹುಂಚದಕಟ್ಟೆ, ಮಧುಗಿರಿ, ಮಾಗಡಿ, ಕೊಟ್ಟಿಗೆಹಾರ, ಅರಕಲಗೂಡಿನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.