Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-09

ಜಿಲ್ಲೆಯ ಪಂಗಡಗಳ ಸಮಸ್ಯೆ ಪರಿಹಾರಕ್ಕೆ ಉಪ ವಿಭಾಗಮಟ್ಟದಲ್ಲಿ ನಿಯಮಿತ ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿಯ ಸೂಚನೆ

News Details

ಜಿಲ್ಲೆಯಲ್ಲಿರುವ ಪ ಜಾತಿ ಮತ್ತು ಪಂಗಡದವರ ಕುಂದು ಕೊರತೆಗಳ ಬಗ್ಗೆ ಎಲ್ಲಾ ಉಪ ವಿಭಾಗಮಟ್ಟದಲ್ಲಿ ನಿಯಮಿತವಾಗಿ ನಡೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯಾ ಸೂಚನೆ ನೀಡಿದ್ದಾರೆ.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಪ ಜಾತಿ ಮತ್ತು ಪಂಗಡದವರ ವಿವಿಧ ಸಮಸ್ಯೆಗಳ ಬಗ್ಗೆ ನಿಯಮಿತವಾಗಿ ಸಭೆಗಳನ್ನು ನಡೆಸಿ, ಆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಪ್ರಸ್ತುತ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಗೆ ಹೊಸದಾಗಿ ನೇಮಕಗೊಂಡಿರುವ ಸದಸ್ಯರು ತಮ್ಮ ತಾಲೂಕು ವ್ಯಾಪ್ತಿಯಲ್ಲಿನ ಪ ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಸಮಿತಿ ಸಭೆಯ ಗಮನಕ್ಕೆ ತರುವಂತೆ ತಿಳಿಸಿದರು.

ಮಿರ್ಜಾನದಲ್ಲಿನ ಅಲೆಮಾರಿ ಕುಟುಂಬಗಳಿಗೆ ಸೂಕ್ತ ದಾಖಲೆಗಳಿದ್ದರೂ ವಸತಿ ಸೌಲಭ್ಯ ದೊರೆಯುತ್ತಿಲ್ಲ. ಈ ಬಗ್ಗೆ ಗಮನ ಹÀರಿಸುವಂತೆ ಮತ್ತು ಕುಮಟಾ ಸೇರಿದಂತೆ ದಾಂಡೇಲಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಜಾಲಿ ಮತ್ತು ಮಂಕಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಎಸ್.ಸಿ.ಎಸ್.ಟಿ ಸ್ಮಶಾನ ಭೂಮಿ ಇಲ್ಲದ ಬಗ್ಗೆ ಸದಸ್ಯರು ತಿಳಿಸಿದರು. ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಎಸ್ ಸಿ ಎಸ್ ಟಿ ಸ್ಮಶಾನಕ್ಕೆ ಭೂಮಿ ಗುರುತಿಸುವ ಕಾರ್ಯವನ್ನು ಆದ್ಯತೆಯಲ್ಲಿ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ನೀಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಸಂತ್ರಸ್ಥರಿಗೆ ಕೂಡಲೇ ಅಗತ್ಯ ನೆರವು ಒದಗಿಸುವಂತೆ ಮತ್ತು ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಆದಷ್ಟು ಶೀಘ್ರದಲ್ಲಿ ಇತ್ಯರ್ಥವಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸಿದ್ದಿ ಜನಾಂಗದವರಿಗೆ ಪೂರೈಕೆಯಾಗುವ ಪೌಷ್ಠಿಕ ಆಹಾರದ ಗುಣಮಟ್ಟದಲ್ಲಿ ವ್ಯತ್ಯಾಸವಾಗದಂತೆ ಎಚ್ಚರವಹಿಸಿ ಎಂದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್‌ಮ ವೈ.ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.