Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-15

ಅರಣ್ಯ ಹಕ್ಕು ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಹೆಜ್ಜೆ ಕಾಗೋಡ ತಿಮ್ಮಪ್ಪ

News Details

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬoಧಿಸಿ ಉoಟಾಗಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಹೇಳಿದ್ದಾರೆ.

ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಸಾಗರದಲ್ಲಿ ಕಾಗೋಡ ತಿಮ್ಮಪ್ಪ ಅವರನ್ನು ಭೇಟಿ ಮಾಡಿದರು. ಈ ವೇಳೆ ಅವರು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವ ಭರವಸೆ ನೀಡಿದರು.

`ಕಾನೂನು ಅನುಷ್ಠಾನದಲ್ಲಿ ಪದೇ ಪದೇ ವೈಫಲ್ಯವಾಗುತ್ತಿರುವುದು, ಕಾನೂನು ವ್ಯತಿರಿಕ್ತವಾಗಿ ಮತ್ತು ಕಾನೂನು ವಿಧಿವಿಧಾನ ಅನುಸರಿಸದೇ ಅರ್ಜಿಗಳನ್ನು ಪುನರ್ ಪರಿಶೀಲಿಸುವುದರಿಂದ ಅರಣ್ಯ ಭೂಮಿ ಮಂಜೂರಿ ಪ್ರಕ್ರಿಯೆ ಗೊಂದಲಕ್ಕೆ ಕಾರಣವಾಗಿದೆ' ಎಂದವರು ಅಭಿಪ್ರಾಯಪಟ್ಟರು. ಅರಣ್ಯ ಹಕ್ಕು ಸಮಿತಿಗಳು 1930 ರ ಪೂರ್ವದ ವಯಕ್ತಿಕ ದಾಖಲೆಗಳನ್ನ ಅರಣ್ಯವಾಸಿಗಳಿಂದ ಕಾನೂನಿಗೆ ವಿರುಧ್ದವಾಗಿ ಅಪೇಕ್ಷೀಸುವುದು ಮತ್ತು ನಾಮ ನಿರ್ಧೇಶನ ಸದಸ್ಯರ ಅನುಪ ಸ್ಥಿತಿಯಲ್ಲಿ ಪುನರ್ ಪರಿಶೀಲನಾ ಪ್ರಕ್ರಿಯೆ ಜರುಗುತ್ತಿರುವ ಬಗ್ಗೆ ಆಕ್ಷೇಪಿಸುವುದಾಗಿ ಹೇಳಿದರು.

`ಅರಣ್ಯವಾಸಿಗಳ ಸಮಸ್ಯೆಗಳನ್ನು ಈಡೇರಿಸುವಲ್ಲಿ ಕಾನೂನು ಅರಣ್ಯವಾಸಿಗಳ ಪರವಾಗಿ ಇದ್ದಾಗಲೂ, ಕಾನೂನು ಅರ್ಥೈಸುವಿಕೆಯಲ್ಲಿ ಜನ ಪ್ರತಿನಿಧಿಗಳ ಗಂಭೀರ ಚಿಂತನೆ ಅವಶ್ಯ. ಈ ಹಿನ್ನಲೆಯಲ್ಲಿ ಜನಪ್ರತಿನಿಧಿಗಳು ಗಂಭೀರವಾಗಿ ಚಿಂತಿಸಬೇಕಾಗಿದೆ' ಎಂದು ಕಾಗೋಡು ತಿಮ್ಮಪ್ಪ ಅವರು ಅನಿಸಿಕೆ ಹಂಚಿಕೊAಡರು.