Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-17

ಕಾಗೋಡ ತಿಮ್ಮಪ್ಪರಿಂದ ಸಿಎಂಗೆ ಪತ್ರ

News Details

ಅನಾಧಿಕಾಲದಿಂದಲೂ ಅರಣ್ಯ ಅತಿಕ್ರಮಿಸಿಕೊಂಡಿರುವ ಬಡ ಜನರ ಬಗ್ಗೆ ಹೋರಾಟ ನಡೆಸುತ್ತಿರುವ ಹಿರಿಯ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಅವರು ಹೋರಾಟದ ಮುಂದಿನ ಹಾದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

`ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಪಾರಂಪರಿಕ ಅರಣ್ಯವಾಸಿಗಳ ಸಾಗುವಳಿ ಹಕ್ಕಿಗೆ ಸಂಬoಧಿಸಿ ಕಾನೂನುಬಾಹಿರವಾಗಿ ಪುನರ್ ಪರಿಶೀಲನೆ ಮಾಡುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು' ಎಂದವರು ಒತ್ತಾಯಿಸಿದ್ದಾರೆ. `ನಿಯಮದಲ್ಲಿ ನಿರ್ದಿಷ್ಟಪಡಿಸಿದ ಸಾಂದರ್ಭಿಕ ಸಾಕ್ಷವನ್ನು ಅರಣ್ಯ ಭೂಮಿ ಹಕ್ಕಿಗೆ ಪರಿಗಣಿಸಲು ನಿರ್ದೆಶನ ನೀಡಬೇಕು' ಎಂದು ಆಗ್ರಹಿಸಿದ್ದಾರೆ.

`ಅರಣ್ಯವಾಸಿಗಳಿಗೆ ಈಗಲೂ ಮೂರು ತಲೆಮಾರಿನ ವಯಕ್ತಿಕ ದಾಖಲೆಗೆ ಒತ್ತಾಯಿಸಲಾಗುತ್ತಿದೆ. ಕಾನೂನಿನ 1ನೇ ನಿಯಮದಲ್ಲಿ ನಿರ್ದಿಷ್ಟಪಡಿಸಿದ ಒಂದಕ್ಕಿoತ ಹೆಚ್ಚು ಸಾಂದರ್ಭಿಕ ಸಾಕ್ಷ ಪರಿಗಣಿಸುವದನ್ನು ಗಂಭೀರವಾಗಿ ಪರಿಗಣಿಸಿಲ್ಲ' ಎಂದವರು ಅಸಮಧಾನವ್ಯಕ್ತಪಡಿಸಿದ್ದಾರೆ. ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಈ ವೇಳೆ ಕಾನೂನುಬಾಹಿರ ಮತ್ತು ಕಾನೂನಿಗೆ ವ್ಯತಿರಿಕ್ತವಾಗಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಅರ್ಜಿಗಳನ್ನ ಪುನರ್ ಪರಿಶೀಲನೆ ನಡೆದಿರುವುದನ್ನು ಆಕ್ಷೇಪಿಸಿದ್ದಾರೆ.