Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-08

ಸಂಜೀವಿನಿ ಸಿಬ್ಬಂದಿಗೆ ಆತ್ಮೀಯ ಸೇವೆ ನಡೆಸುವಂತೆ ಕರೀಂ ಅಸಾದಿ ಸೂಚನೆ

News Details

ಸಂಜೀವಿನಿ ಒಕ್ಕೂಟದಡಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಯೊಂದು ಸಿಬ್ಬಂದಿಗಳು ತುಂಬಾ ಆತ್ಮೀಯತೆ ಹಾಗೂ ಪ್ರೀತಿಯಿಂದ ಯಾವುದೇ ತಕರಾರುಗಳಿಲ್ಲದೆ ತಾಳ್ಮೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಕರೀಂ ಅಸಾದಿ ಸೂಚನೆ ನೀಡಿದರು.
ಅವರು ಸೋಮವಾರ ಶಿರಸಿ ತಾಲೂಕಿನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಸಂಜೀವಿನಿ ಒಕ್ಕೂಟದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಎನ್.ಆರ್.ಎಲ್.ಎಂ. ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಯಾವುದೇ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಒತ್ತಡ ಹೇರುವುದಾಗಲಿ, ಅಥವಾ ಕಿರುಕುಳವಾಗದಂತೆ ನೋಡಿಕೊಳ್ಳಬೇಕು ಎಂದ ಅವರು ನರೇಗಾ ಯೋಜನೆಯ ಕಾಮಗಾರಿಗಳ ಕುರಿತು ಮಾಹಿತಿಯನ್ನು ನಿಮ್ಮ ಸುತ್ತಲಿನ ಜನರಿಗೂ ತಿಳಿಸುವುದರ ಜೊತೆಗೆ ಕಾಮಗಾರಿ ಪಡೆದುಕೊಳ್ಳುವಂತೆ ಉತ್ತೇಜಿಸುವುದು. ಸರ್ಕಾರದ ಪ್ರತಿಯೊಂದು ಯೋಜನೆಗಳ ಸದುಪಯೋಗವನ್ನು ಪಡಿಸಿಕೊಳ್ಳಲು ಜಾಗೃತಿ ಮೂಡಿಸಬೇಕು ಎಂದರು.
ಸಭೆಯ ಪೂರ್ವದಲ್ಲಿ ಹುತ್ತಗಾರ ಗ್ರಾಮ ಪಂಚಾಯತ್‌ನ ಗಣೇಶ ನಗರದಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾದ ಮಳೆನೀರಿನ ಕೊಯ್ಲು ಕಾಮಗಾರಿ ಪರಿಶೀಲನೆ ನಡೆಸಿದರು. ಹಾಗೂ ತಾಲೂಕು ಪಂಚಾಯತ್ ಕಚೇರಿ ಭೇಟಿ ನಡೆಸಿ ನರೇಗಾ ಪ್ರಗತಿ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಚನ್ನಬಸಪ್ಪ ಹಾವಣಗಿ, ತಾಲೂಕು ಪಂಚಾಯತ್ ಸಿಬ್ಬಂದಿಗಳು, ಎನ್.ಆರ್.ಎಲ್.ಎಂ ಸಿಬ್ಬಂದಿಗಳು ಇದ್ದರು.